Breaking News

ಕಲಬುರಗಿ: ಅಂತರ್ಜಾತಿ ವಿವಾಹ ಪ್ರೋತ್ಸಹಧನ ಹೆಸರಲ್ಲಿ ಭಾರಿ ಗೋಲ್ಮಾಲ್, ನಕಲಿ ಜೋಡಿಗಳ ಸೃಷ್ಟಿಸಿ ಲಕ್ಷಾಂತರ ರೂ. ಲೂಟಿ

ಕಲಬುರಗಿ: ರಾಜ್ಯ ಸರ್ಕಾರ ಅಂತರ್ಜಾತಿ ವಿವಾಹವಾದ ಜೋಡಿಗಳಿಗೆ ನೀಡುವ ಪ್ರೋತ್ಸಾಹಧನದಲ್ಲಿ ಗೋಲ್ಮಾಲ್ ನಡೆದಿರುವ ಆರೋಪ ಚಿಂಚೋಳಿ ತಾಲೂಕಿನಲ್ಲಿ ಕೇಳಿಬಂದಿದೆ. ನಕಲಿ ಜೋಡಿಗಳನ್ನು ಸೃಷ್ಟಿಸಿ ಲಕ್ಷಾಂತರ ರೂಪಾಯಿ ದುರುಪಯೋಗಪಡಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿಂಚೋಳಿ ತಾಲೂಕಿನಲ್ಲಿ 170ಕ್ಕೂ ಹೆಚ್ಚು ಅಂತರ್ಜಾತಿ ವಿವಾಹಗಳು ನಡೆದಿದ್ದು, ಇವುಗಳಲ್ಲಿ ಎಷ್ಟು ನೈಜ ಎಂಬ ಅನುಮಾನ ಮೂಡಿದೆ. ಕೆಲವೆಡೆ ಅಧಿಕಾರಿಗಳು ಪಂಚನಾಮೆ ನಡೆಸದೆ ಹಣ ಬಿಡುಗಡೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಕೆಲವು ಏಜೆಂಟರು ಅಧಿಕಾರಿಗಳೊಂದಿಗೆ ಶಾಮೀಲಾಗಿ ಹಣ ಲಪಟಾಯಿಸಿದ್ದಾರೆ ಎನ್ನಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ ತನಿಖೆ ನಡೆಸುತ್ತಿದೆ. ಪ್ರಕರಣದ ಸಂಪೂರ್ಣ ಸತ್ಯಾಂಶ ತನಿಖೆಯಿಂದ ಹೊರಬರಬೇಕಿದೆ.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *