ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ನಕಲಿ ಔಷಧ ಜಾಲದ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ₹200ರಿಂದ ₹300 ಬೆಲೆಯ ಆಂಟಿಬಯೋಟಿಕ್ ಔಷಧಗಳಿಗೆ ಪ್ರಸಿದ್ಧ ಅಂತಾರಾಷ್ಟ್ರೀಯ ಬ್ರ್ಯಾಂಡ್‌ಗಳ ನಕಲಿ ಲೇಬಲ್ ಅಂಟಿಸಿ, 26ರಿಂದ 30 ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಎಸ್‌ಐಟಿ ಪತ್ತೆಹಚ್ಚಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಹಿಮಾಚಲ ಪ್ರದೇಶ, ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳಿಂದ ಅಗ್ಗದ ಔಷಧಗಳನ್ನು ತರಿಸಿಕೊಂಡು, ಬೆಂಗಳೂರಿನ ಸಮೀಪದ ಬಿಡದಿಯಲ್ಲಿ ನಕಲಿ ಪ್ಯಾಕೆಟ್‌ಗಳಲ್ಲಿ ಮರುಪ್ಯಾಕಿಂಗ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಬಳಿಕ ಜಾವಿಸೆಫ್ಟಾ ಮತ್ತು ಎಂಬ್ಲಾಬಿಯೋ ಬ್ರ್ಯಾಂಡ್‌ಗಳ ಹೆಸರಿನಲ್ಲಿ ಸಾವಿರಾರು ರೂಪಾಯಿಗಳಿಗೆ ಮಾರಾಟ ಮಾಡಲಾಗುತ್ತಿತ್ತು. ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ, ಹಿಮಾಚಲ ಪ್ರದೇಶ, ತೆಲಂಗಾಣ ಹಾಗೂ ಹರಿಯಾಣದಲ್ಲಿ ದಾಳಿ ನಡೆಸಿ ದಾಖಲೆಗಳು, ನಕಲಿ ಬಾಕ್ಸ್‌ಗಳು ಮತ್ತು ಲೇಬಲ್‌ಗಳ ಆರ್ಡರ್‌ಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದೆ. ಜಾಲದಲ್ಲಿ ಭಾಗಿಯಾಗಿರುವ ಇತರರ ಪತ್ತೆಗಾಗಿ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
