ಮಂಗಳೂರು: ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ₹1.58 ಕೋಟಿ ಮೌಲ್ಯದ 1.79 ಕೆಜಿ MDMA ವಶಪಡಿಸಿಕೊಂಡಿದ್ದು, ಅಬ್ದುಲ್ ಹಾಫಿಲ್ (25), ಝಿಯಾವುಲ್ ಹಕ್ (30) ಹಾಗೂ ಅಲ್ತಾಫ್ (28) ಎಂಬ ಮೂವರನ್ನು ಬಂಧಿಸಿದ್ದಾರೆ. ಮೊಬೈಲ್‌ಗಳು, ಕಾರು ಮತ್ತು ಆಟೋ ರಿಕ್ಷಾ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಉಳ್ಳಾಲ ತಾಲೂಕಿನ ಕುಂಪಲದ ಡಿ ಮಾರ್ಟ್ ಬಳಿ ಗುರುವಾರ ರಾತ್ರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಪಂಜಾಬ್‌ನ ಅಮೃತಸರದಿಂದ MDMA ಖರೀದಿಸಿ, ವಾಟರ್ ಪ್ಯೂರಿಫೈಯರ್‌ನಲ್ಲಿ ಅಡಗಿಸಿಟ್ಟು ಕೊರಿಯರ್ ಮೂಲಕ ಮಂಗಳೂರಿಗೆ ಸಾಗಿಸುತ್ತಿದ್ದರು ಎನ್ನಲಾಗಿದೆ. ನಂತರ ಮಂಗಳೂರು ಹಾಗೂ ಕೇರಳದ ವಿವಿಧೆಡೆ ಮಾದಕವಸ್ತು ಮಾರಾಟಕ್ಕೆ ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
