Breaking News

ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ : ಯುವಕನನ್ನು ಕಿಡ್ನಾಪ್ ಮಾಡಿ ಗುಪ್ತಾಂಗ ಕತ್ತರಿಸಿದ ಮಂಗಳಮುಖಿಯರು!

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನಲ್ಲಿ ಹೂ ಮಾರಾಟ ಮಾಡುತ್ತಿದ್ದ ಯುವಕನನ್ನು ಅಪಹರಿಸಿ, ಅಮಲು ಪದಾರ್ಥ ನೀಡಿ ಬಲವಂತವಾಗಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಿ ಚಿತ್ರಹಿಂಸೆ ನೀಡಿರುವ ಆರೋಪ ಕೇಳಿಬಂದಿದೆ. ಸೆಪ್ಟೆಂಬರ್ 1ರಂದು ಯುವಕನನ್ನು ದಾವಣಗೆರೆಗೆ ಕರೆದೊಯ್ದು ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. ಯುವಕನಿಗೆ ಬಿಸಿನೀರು ಸುರಿದು, ಬರೆ ಎಳೆದು ಹಿಂಸೆ ನೀಡಲಾಗಿದ್ದು, ಹೇಗೋ ತಪ್ಪಿಸಿಕೊಂಡು ಮನೆಗೆ ಮರಳಿದ್ದಾನೆ. ಆದರೆ, ಕುಟುಂಬಸ್ಥರು ಮರ್ಯಾದೆಗೆ ಅಂಜಿ ಘಟನೆ ಮುಚ್ಚಿಟ್ಟಿದ್ದರು ಎನ್ನಲಾಗಿದೆ. ಗುರುವಾರ ಯುವಕನ ಮನೆಗೆ ಬಂದ ತಂಡವೊಂದು ಶಸ್ತ್ರಚಿಕಿತ್ಸೆಗೆ ₹3 ಲಕ್ಷ ವೆಚ್ಚವಾಗಿದ್ದು, ಹಣ ನೀಡುವಂತೆ ಬೆದರಿಸಿ ದಾಂಧಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಘಟನೆ ಖಂಡಿಸಿರುವ ಕುಟುಂಬಸ್ಥರು ಹಾಗೂ ಗ್ರಾಮಸ್ಥರು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *