ಕೊಪ್ಪಳ: ಪತಿ ಮೃತಪಟ್ಟರೆ ಸಾಲ ಮನ್ನಾ ಆಗುತ್ತದೆ ಎಂಬ ಉದ್ದೇಶದಿಂದ ಪತಿಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪಿನ ಉಮಾದೇವಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರಾಘವೇಂದ್ರ ಅವರು ಬ್ಯಾಂಕ್ ಹಾಗೂ ಫೈನಾನ್ಸ್ ಕಂಪನಿಗಳಿಂದ ಸುಮಾರು ₹12.5 ಲಕ್ಷ ಸಾಲ ಪಡೆದಿದ್ದರು. ಸಾಲದ ವಿಮೆ ಮೂಲಕ ಹಣ ಪಾವತಿ ತಪ್ಪಿಸಿಕೊಳ್ಳುವ ಉದ್ದೇಶದಿಂದ ಉಮಾದೇವಿ, ಅಳಿಯ ಶಿವಾಜಿ ಹಾಗೂ ಸ್ನೇಹಿತ ಖಲೀಲ್ ಮನ್ಸೂರ್ ಸಾಬ್ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. ಮೊದಲು ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ, ಬಳಿಕ ವಿಷ ನೀಡಿ ಹಾಗೂ ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿದ್ದಾರೆ. ಕೊನೆಗೆ ತಲೆಗೆ ಹೊಡೆದು ಕೊಲೆ ಮಾಡಿ, ಶವವನ್ನು ರಸ್ತೆ ಬದಿ ಎಸೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮರುದಿನ ಶವ ಪತ್ತೆಯಾದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದು, ಬೈಕ್ ಮೇಲಿದ್ದ ರಕ್ತದ ಕಲೆಗಳ ಸುಳಿವಿನಿಂದ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಗಂಗಾವತಿ ಗ್ರಾಮೀಣ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದು, ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

