ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಹರಸೂರು ಗ್ರಾಮದಲ್ಲಿ ಕರ್ತವ್ಯದ ವೇಳೆ ಮಸೀದಿ ಛಾವಣಿ ಮೇಲೆ ನಿಂತು ಬಿಯರ್ ಕುಡಿದ ಪೊಲೀಸ್ ಕಾನ್ಸ್‌ಟೇಬಲ್ ಹಣಮಂತ ಅವರನ್ನು ಅಮಾನತುಗೊಳಿಸಲಾಗಿದೆ. ಗ್ರಾಮದಲ್ಲಿ ಗಲಾಟೆ ನಡೆದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಈ ವೇಳೆ ಮಹಾಗಾಂವ್ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಹಣಮಂತ ಮಸೀದಿಯ ಛಾವಣಿ ಏರಿ ಬಿಯರ್ ಸೇವಿಸಿದ್ದಾರೆ ಎನ್ನಲಾಗಿದೆ. ಈ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣದ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದು, ಕರ್ತವ್ಯದ ಸಮಯದಲ್ಲಿ ಮದ್ಯ ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವರು ಹಣಮಂತ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

