ರಾಯಚೂರು: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ರಾಯಚೂರಿನ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕಚೇರಿಯಲ್ಲಿ ವಾಮಾಚಾರದ ಶಂಕೆ ವ್ಯಕ್ತವಾಗಿದೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಮೇಲ್ಭಾಗದಲ್ಲಿರುವ ಹುಣಸೆ ಮರಕ್ಕೆ ಮಾನವ ಆಕೃತಿಯ ಕಪ್ಪು ಗೊಂಬೆಯನ್ನು ನೇತುಹಾಕಲಾಗಿತ್ತು. ಕಚೇರಿ ಪರಿಶೀಲನೆಗೆ ತೆರಳಿದ್ದ ಸಿಬ್ಬಂದಿಯೊಬ್ಬರು ಗೊಂಬೆಯನ್ನು ಗಮನಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸಿಬ್ಬಂದಿ ಗೊಂಬೆಯನ್ನು ಸುಟ್ಟು ಹಾಕಿದ್ದಾರೆ. ಬಾಕಿ ಉಳಿದ ಬಿಲ್ಗಳು ಹಾಗೂ ವಿಲೇವಾರಿಯಾಗದ ಕಡತಗಳಿಂದ ಬೇಸತ್ತವರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಿಂದ ಕಚೇರಿ ಸಿಬ್ಬಂದಿಯಲ್ಲಿ ಆತಂಕ ಉಂಟಾಗಿದ್ದು, ತಪ್ಪಿತಸ್ಥರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

