Breaking News

ಪುತ್ತೂರು | ಅಕ್ರಮ ಗೋ ಸಾಗಾಟ ಪ್ರಕರಣ: ಆರೋಪಿ ಶಿವಪ್ರಸಾದ್‌ನ ಮನೆ, ಕೊಟ್ಟಿಗೆ ಜಪ್ತಿ

ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಪ್ರಸಾದ್ ಎಂಬಾತನ ಮನೆ ಮತ್ತು ಕೊಟ್ಟಿಗೆಯ ಪರಿಸರವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅ.8ರಂದು ಈ ಕ್ರಮ ಕೈಗೊಳ್ಳಲಾಗಿದೆ. ಅ.5ರಂದು ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ, ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ತುಂಬಿಸಲಾಗಿದ್ದ 11 ಜಾನುವಾರುಗಳು ಪತ್ತೆಯಾಗಿದ್ದವು. ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ವಾಹನದ ಚಾಲಕ ಸೇರಿದಂತೆ ಇಬ್ಬರು ಪರಾರಿಯಾಗಿದ್ದರು. ತನಿಖೆ ಮುಂದುವರಿಸಿದ ಪೊಲೀಸರು, ಜಾನುವಾರುಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ ಆರ್ಯಾಪು ಗ್ರಾಮದ ಶಿವಪ್ರಸಾದ್‌ನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಪರಾರಿಯಾಗಿದ್ದ ಹಸ್ಪರ್ ಯಾನೆ ಅಮ್ಮಿ ಮತ್ತು ಇಬ್ರಾಹಿಂ ಮಾಡಲಾ ಎಂಬವರನ್ನೂ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *