Breaking News

ಫೇಸ್‌ಬುಕ್‌ನಲ್ಲಿ ಪರಿಚಯ, ಬಳಿಕ ಲೈಂಗಿಕ ದೌರ್ಜನ್ಯ; ಮಹಿಳೆಯ ಪತಿ-ಮಗಳಿಗೆ ಖಾಸಗಿ ವಿಡಿಯೋ ಕಳುಹಿಸಿದ ಆರೋಪಿ ಬಂಧನ

ಕಾಸರಗೋಡು,: ಫೇಸ್‌ಬುಕ್‌ನಲ್ಲಿ ನಕಲಿ ಹೆಸರಿನಲ್ಲಿ ಪರಿಚಯ ಮಾಡಿಕೊಂಡು ವಿವಾಹಿತ ಮಹಿಳೆಗೆ ಮಾದಕ ವಸ್ತು ನೀಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಕೊಲ್ಲಂ ಮೂಲದ 32 ವರ್ಷದ ರಾಹುಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ‘ಪ್ರೇಮ್’ ಎಂಬ ಹೆಸರಿನಲ್ಲಿ ಮಹಿಳೆಯೊಂದಿಗೆ ಸ್ನೇಹ ಬೆಳೆಸಿ, ಕೋಝಿಕ್ಕೋಡ್, ಕಣ್ಣೂರಿನ ಪರಶಿನಿಕಡವು ಪ್ರದೇಶದ ಲಾಡ್ಜ್ ಹಾಗೂ ಮಹಿಳೆಯ ಮನೆಯಲ್ಲಿಯೂ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಹಿಳೆ ತನ್ನ ಮೊಬೈಲ್ ಸಂಖ್ಯೆಯನ್ನು ಬ್ಲಾಕ್ ಮಾಡಿದ ಬಳಿಕ, ಆಕೆಯ ಖಾಸಗಿ ವಿಡಿಯೋವನ್ನು ವಿದೇಶದಲ್ಲಿರುವ ಪತಿ ಹಾಗೂ ಮಗಳಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದಾನೆ ಎನ್ನಲಾಗಿದೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಅಂಬಲತ್ತಾರ ಪೊಲೀಸರು ಎರ್ನಾಕುಲಂನಲ್ಲಿ ಆರೋಪಿಯನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *