Breaking News

ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್ ಬೆಂಕಿ: ಕಮೀಷ್ನರ್ ಕಚೇರಿ ಮುಂದೆಯೇ ಧಗ ಧಗನೆ ಹೊತ್ತಿ ಉರಿದ ಕಾರು

ಬೆಂಗಳೂರು: ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿ ಮುಂಭಾಗದಲ್ಲಿ ಚಲಿಸುತ್ತಿದ್ದ ಟೊಯೊಟಾ ಟೈಸರ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಜಕ್ಕೂರಿನಿಂದ ಬರುತ್ತಿದ್ದ ಕಾರನ್ನು ಮಾಲೀಕ ಶಬ್ಬೀರ್ ಚಲಾಯಿಸುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅವರು ತಕ್ಷಣ ಕಾರಿನಿಂದ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮೀಪದ ಸ್ಪರ್ಶ್ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸ್ಥಳೀಯರು ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ನಡುರಸ್ತೆಯಲ್ಲಿ ಕಾರು ಹೊತ್ತಿ ಉರಿದ ಪರಿಣಾಮ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *