ದಾವಣಗೆರೆ: ಮದುವೆ ನಿಶ್ಚಯವಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ವೈದ್ಯಕೀಯ ತಪಾಸಣೆಯಿಂದ ತಿಳಿದುಬಂದಿದೆ. ಎರಡು ಕುಟುಂಬಗಳ ಒಪ್ಪಿಗೆಯಂತೆ ಮದುವೆ ನಿಶ್ಚಯವಾಗಿದ್ದು, ಬಾಲಕಿ ಪ್ರಾಪ್ತವಯಸ್ಕಳಾಗಲು ಇನ್ನೂ 15 ತಿಂಗಳು ಬಾಕಿ ಇತ್ತು ಎನ್ನಲಾಗಿದೆ. ಈ ನಡುವೆ ಯುವಕ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

