Breaking News

ಮದುವೆಗೂ ಮುನ್ನ ಭಾವೀ ಪತ್ನಿಯೊಂದಿಗೆ ಸಂಪರ್ಕ – ಗರ್ಭಿಣಿ ಮಾಡಿದಾತನ ಮೇಲೆ ಪೋಕ್ಸೋ ಕೇಸ್!

ದಾವಣಗೆರೆ: ಮದುವೆ ನಿಶ್ಚಯವಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ದಾವಣಗೆರೆ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಎರಡು ಕುಟುಂಬಗಳ ಒಪ್ಪಿಗೆಯಂತೆ ಬಾಲಕಿ ಮತ್ತು ಯುವಕನ ಮದುವೆ ನಿಶ್ಚಯವಾಗಿತ್ತು. ಆದರೆ, ಬಾಲಕಿ ಅಪ್ರಾಪ್ತೆಯಾಗಿದ್ದು, ಪ್ರಾಪ್ತವಯಸ್ಕಳಾಗಲು ಇನ್ನೂ 15 ತಿಂಗಳು ಬಾಕಿ ಇತ್ತು ಎನ್ನಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *