ಬಳ್ಳಾರಿ: ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯುತ್ ಕಡಿತದ ವೇಳೆ ಮೊಬೈಲ್ ಟಾರ್ಚ್ ಬಳಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ವರದಿಗೆ ಜಿಲ್ಲಾ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಅಕ್ಟೋಬರ್ 6ರಂದು ಆಸ್ಪತ್ರೆಯ ಪಿ.ಎನ್.ಸಿ ವಿಭಾಗದಲ್ಲಿ ಸುಮಾರು 20 ನಿಮಿಷ ವಿದ್ಯುತ್ ವ್ಯತ್ಯಯ ಉಂಟಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಯ ಸಿಸಿಟಿವಿ ಪರಿಶೀಲಿಸಿದಾಗ, ರೋಗಿಯೊಬ್ಬರ ಸಂಬಂಧಿಕರು ಬ್ಯಾಟರಿ ಸ್ವಿಚ್ ಆಫ್ ಮಾಡಿದ್ದರಿಂದ ಈ ಸಮಸ್ಯೆ ಉಂಟಾಗಿರುವುದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ರೋಗಿಗಳಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಏಳು ಯುಪಿಎಸ್ ಬ್ಯಾಟರಿಗಳು ಹಾಗೂ 62.5 ಕೆವಿಎ ಸಾಮರ್ಥ್ಯದ ಜನರೇಟರ್ ವ್ಯವಸ್ಥೆ ಇದೆ. ವಿದ್ಯುತ್ ಪೂರೈಕೆ ವ್ಯವಸ್ಥೆಯ ನಿರ್ವಹಣೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲೂ ರೋಗಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

