Breaking News

ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ! ಬೆಂಗಳೂರಲ್ಲಿ ಸತೀಶ್ ಪಾತ್ರಿ ಬಂಧನ

ಚಿಕ್ಕಮಗಳೂರು, ಅ.12: ದೆವ್ವ ಬಿಡಿಸುವ ನೆಪದಲ್ಲಿ ಹಾಸನ ಮೂಲದ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸತೀಶ್ ಪಾತ್ರಿ ಎಂಬಾತನನ್ನು ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ. ಆರೋಪಿ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದನು. ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕಿಗೆ ಭೂತ ಬಿಡಿಸುವ ನೆಪದಲ್ಲಿ ಬಲವಂತವಾಗಿ ಕೋಳಿ ರಕ್ತ ಕುಡಿಸಿದ ಆರೋಪವೂ ಸತೀಶ್ ಮೇಲಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗಿ ಆಕ್ರೋಶಕ್ಕೆ ಕಾರಣವಾಗಿದ್ದವು. ಇನ್ನು, ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ ಎನ್.ಆರ್. ಪುರ ಠಾಣೆಯ ಕಾನ್ಸ್‌ಟೇಬಲ್ ಕಾಂತೇಶ್‌ನನ್ನು ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತುಗೊಳಿಸಿದ್ದಾರೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *