ಬೆಳಗಾವಿ: ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಸಮೀಪ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಪರವಾನಗಿ ಇಲ್ಲದೆ ಸಾಗಿಸುತ್ತಿದ್ದ 24 ಸಾವಿರ ಲೀಟರ್ ಮದ್ಯವನ್ನು ಟ್ಯಾಂಕರ್ ಸಮೇತ ವಶಪಡಿಸಿಕೊಂಡಿದ್ದಾರೆ. ಹೊಳಿಹೊಸೂರು ಗ್ರಾಮದಿಂದ ಎಂ.ಕೆ. ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ರಾಜ್ಯ ಹೆದ್ದಾರಿಯಲ್ಲಿ ಮಧ್ಯರಾತ್ರಿ 12.25ರ ಸುಮಾರಿಗೆ ಗಸ್ತಿನಲ್ಲಿದ್ದ ಅಧಿಕಾರಿಗಳು ಅನುಮಾನಾಸ್ಪದ ಟ್ಯಾಂಕರ್ ತಡೆದು ತಪಾಸಣೆ ನಡೆಸಿದಾಗ ಅಕ್ರಮ ಮದ್ಯ ಪತ್ತೆಯಾಗಿದೆ. ಮದ್ಯ ಹಾಗೂ ಟ್ಯಾಂಕರ್‌ನ ಒಟ್ಟು ಮೌಲ್ಯ ₹32.40 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ವಿಜಯಪುರ ಜಿಲ್ಲೆಯ ಬೋಳಚಿಕ್ಕಲಕಿ ಗ್ರಾಮದ ಚಾಲಕ ಬಂಡೆನವಾಜ್ ನಬಿ ಸಾಬ್ ತಿಗಣಿಬಿದರಿ ಅವರಿಗೆ ನೋಟಿಸ್ ನೀಡಲಾಗಿದ್ದು, ವಾಹನದ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಥಮ ಮಾಹಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

