Breaking News

ಶಿವಾಚಾರ್ಯ ಸ್ವಾಮೀಜಿ Arrest: ಲೈಂಗಿಕ ದೌರ್ಜನ್ಯ ಪ್ರಕರಣ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಹುಣಸಮಾರನಹಳ್ಳಿ ಮಠದ ದಯಾನಂದ ಅಲಿಯಾಸ್ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಬೆಂಗಳೂರಿನ ವಿಮಾನ ನಿಲ್ದಾಣದ ಸಮೀಪವಿರುವ ಹುಣಸಮಾರನಹಳ್ಳಿ ಮಠವು 1,500ಕ್ಕೂ ಅಧಿಕ ಎಕರೆ ಜಮೀನು ಹೊಂದಿದೆ ಎನ್ನಲಾಗಿದ್ದು, 2017ರಲ್ಲಿಯೂ ಸ್ವಾಮೀಜಿ ವಿರುದ್ಧ ಇಂತಹ ಆರೋಪಗಳು ಕೇಳಿಬಂದಿದ್ದವು. ಸದ್ಯ ಪೊಲೀಸರು ಪ್ರಕರಣದ ಕುರಿತು ವಿಚಾರಣೆ ಮುಂದುವರಿಸಿದ್ದು, ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದ ತಿಳಿಯಬೇಕಿದೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *