Breaking News

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಗಮನ ಬೇರೆಡೆ ಸೆಳೆದು ಚಿನ್ನಾಭರಣ ದೋಚುತ್ತಿದ್ದ ಅಂತಾರಾಜ್ಯ ಕಳ್ಳಿಯರು ಅರೆಸ್ಟ್!

ಚಿತ್ರದುರ್ಗ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಶಾಂತಿ ಮತ್ತು ನೀಲವೇಣಿ ಎಂಬ ಇಬ್ಬರನ್ನು ಚಳ್ಳಕೆರೆ ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ಮೂಲದ ಲಕ್ಷ್ಮಿ ಎಂಬುವವರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಬ್ಯಾಗ್‌ನಲ್ಲಿದ್ದ ಚಿನ್ನದ ಸರ ಹಾಗೂ ಕಿವಿಯೋಲೆಗಳನ್ನು ಆರೋಪಿಗಳು ಕಳವು ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಳ್ಳಕೆರೆ ಮತ್ತು ಮೊಳಕಾಲ್ಮೂರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 55 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಸುಮಾರು 6.3 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *