Breaking News

ಉಡುಪಿ: ದನ ಕಳವು ಮಾಡಿ ಕಸಾಯಿಖಾನೆಗೆ ಸಾಗಿಸಲು ಯತ್ನ: ಇಬ್ಬರ ಬಂಧನ

ಉಡುಪಿ: ಕಾರ್ಕಳ ತಾಲ್ಲೂಕಿನ ಕುಕ್ಕುಜೆ ಸಮೀಪ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಅಬ್ದುಲ್ ಸತ್ತರ್ (54) ಮತ್ತು ಯೋಗೀಶ ನಾಯ್ಕ್ (49) ಎಂಬುವವರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಅ. 9ರಂದು ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಗೂಡ್ಸ್‌ ಟೆಂಪೊವನ್ನು ತಡೆದು ಪರಿಶೀಲಿಸಿದಾಗ ನಾಲ್ಕು ಜಾನುವಾರುಗಳು ಪತ್ತೆಯಾಗಿವೆ. ಇವುಗಳನ್ನು ಕುಕ್ಕುಜೆ ಗ್ರಾಮದ ಕೃಷ್ಣ ಪೂಜಾರಿ ಅವರ ಮನೆಯ ಸಮೀಪದಿಂದ ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಿಸಲಾದ ಜಾನುವಾರುಗಳ ಮೌಲ್ಯ ₹20 ಸಾವಿರ ಹಾಗೂ ವಶಪಡಿಸಿಕೊಂಡ ಟೆಂಪೊದ ಮೌಲ್ಯ ₹3 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *