ಚಿಕ್ಕಮಗಳೂರು: ಅತ್ಯಾಚಾರ ಆರೋಪದಡಿ ನರಸಿಂಹರಾಜಪುರ ತಾಲೂಕಿನ ಮೇಕನಹಡ್ಲು ಗ್ರಾಮದ ಎಸ್. ಸತೀಶ್ ಕುಮಾರ್ ಅಲಿಯಾಸ್ ಸತೀಶ್ ಪಾತ್ರಿ ಎಂಬಾತನನ್ನು ಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತನ್ನ ಮೈಮೇಲೆ ಗಣ ಬರುತ್ತದೆ, ಜನರ ಕಷ್ಟಗಳನ್ನು ಪರಿಹರಿಸುತ್ತೇನೆ ಎಂದು ನಂಬಿಸುತ್ತಿದ್ದ ಸತೀಶ್ ಪಾತ್ರಿ, ಕಷ್ಟ ಹೇಳಿಕೊಳ್ಳಲು ಬರುತ್ತಿದ್ದ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಈ ಹಿಂದೆ ನರಸಿಂಹರಾಜಪುರ ಠಾಣೆಯಲ್ಲೂ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಾಸನದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸುಮಾರು ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನ ಜೆ.ಪಿ. ನಗರದಲ್ಲಿ ಕೊಪ್ಪ ಎಸ್‌ಐ ಮಧು ಮತ್ತು ಸಿಬ್ಬಂದಿ ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

