Breaking News

ದೇವಸ್ಥಾನಗಳೇ ಟಾರ್ಗೆಟ್! ವಿಗ್ರಹ ಕಳ್ಳತನ ಮಾಡುತ್ತಿದ್ದ ಖದೀಮರು ಅರೆಸ್ಟ್

ಬೆಂಗಳೂರು: ದೇವಸ್ಥಾನಗಳಲ್ಲಿನ ದೇವರ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ, ಆಂಜನೇಯ ಹಾಗೂ ಲಕ್ಷ್ಮೀ ನಾಗರ ಸೇರಿದಂತೆ ನಾಲ್ಕು ವಿಗ್ರಹಗಳನ್ನು ಕಳವು ಮಾಡಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ್ದ ವಿಗ್ರಹಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ದೇವಸ್ಥಾನಗಳ ವಿಗ್ರಹಗಳಲ್ಲದೆ, ನಿರ್ಮಾಣ ಹಂತದ ಕಟ್ಟಡಗಳಲ್ಲಿನ ಯಂತ್ರೋಪಕರಣಗಳನ್ನೂ ಆರೋಪಿಗಳು ಕದ್ದಿರುವ ಆರೋಪವಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಕುಂದಾಪುರ : ಪತಿಯ ಕಿರುಕುಳಕ್ಕೆ ಮನನೊಂದ ಗೃಹಿಣಿ ಫಿನಾಯಿಲ್‌ ಸೇವನೆ, ದೂರು ದಾಖಲು

ಉಡುಪಿ: ಪತಿಯ ಕಿರುಕುಳದಿಂದ ಮನನೊಂದ ಗೃಹಿಣಿಯೊಬ್ಬರು ಫಿನಾಯಿಲ್ ಸೇವಿಸಿ ಅಸ್ವಸ್ಥಗೊಂಡ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಲೂರಿನ …

Leave a Reply

Your email address will not be published. Required fields are marked *