ಮಂಗಳೂರು: ಮೊಬೈಲ್ ವಾಪಸ್ ನೀಡದೆ ಹಾಳು ಮಾಡಿದ್ದ ದ್ವೇಷದಿಂದ ವ್ಯಕ್ತಿಯನ್ನು ಮರದ ಸೊಂಟೆಯಿಂದ ಹೊಡೆದು ಕೊಲೆ ಮಾಡಿದ ಧರ್ಮರಾಜ್ ಸುವರ್ಣ (50) ಎಂಬಾತನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿದೆ. 2024ರ ಸೆಪ್ಟೆಂಬರ್ 21ರಂದು ತೋಟ ಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಭಾಗದ ಸಮುದ್ರ ಕಿನಾರೆ ಬಳಿ ಬಾಗಲಕೋಟೆ ಮೂಲದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ (39) ಅವರನ್ನು ಧರ್ಮರಾಜ್ ಕೊಲೆ ಮಾಡಿ ಪರಾರಿಯಾಗಿದ್ದ. ಸೆಪ್ಟೆಂಬರ್ 26ರಂದು ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಚೊಂಪಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಣಂಬೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ್ ಅವರು ಅಕ್ಟೋಬರ್ 12ರಂದು ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ ನಾಯಕ ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

