Breaking News

ಮಂಗಳೂರು : ಅನೈತಿಕ ಸಂಬಂಧ ಶಂಕೆ ಹಿನ್ನಲೆ, ಚೂರಿಯಿಂದ ಇರಿದು ಪತ್ನಿಯ ಭೀಕರ ಕೊಲೆ, ಪತಿ ಅರೆಸ್ಟ್!

ಮಂಗಳೂರು: ಅನೈತಿಕ ಸಂಬಂಧದ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಸೋನಾಲಿ (30) ಕೊಲೆಯಾದ ಮಹಿಳೆ. ಆರೋಪಿ ಪತಿ ಶಿವಲಿಂಗಪ್ಪ (40)ನನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 12ರಂದು ಬಾಡಿಗೆ ಮನೆಯಲ್ಲಿ ದಂಪತಿ ನಡುವೆ ಅನೈತಿಕ ಸಂಬಂಧದ ಶಂಕೆಯಿಂದ ಜಗಳ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಶಿವಲಿಂಗಪ್ಪ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಕುಂದಾಪುರ : ಪತಿಯ ಕಿರುಕುಳಕ್ಕೆ ಮನನೊಂದ ಗೃಹಿಣಿ ಫಿನಾಯಿಲ್‌ ಸೇವನೆ, ದೂರು ದಾಖಲು

ಉಡುಪಿ: ಪತಿಯ ಕಿರುಕುಳದಿಂದ ಮನನೊಂದ ಗೃಹಿಣಿಯೊಬ್ಬರು ಫಿನಾಯಿಲ್ ಸೇವಿಸಿ ಅಸ್ವಸ್ಥಗೊಂಡ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಲೂರಿನ …

Leave a Reply

Your email address will not be published. Required fields are marked *