Breaking News

ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹೊಳಲ್ಕೆರೆ ತಾಲ್ಲೂಕಿನ ಕೊಡಗವಳ್ಳಿ ಗ್ರಾಮದ ಮಂಜುನಾಥ (33) ಎಂಬಾತನಿಗೆ ಚಿತ್ರದುರ್ಗದ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ. 2024ರ ಜನವರಿ 15ರಂದು ಬಾಲಕಿಯನ್ನು ಅಪಹರಿಸಿ ಮಾಳೇನಹಳ್ಳಿ ಗ್ರಾಮದ ಬಳಿ ಅತ್ಯಾಚಾರ ಎಸಗಿದ್ದ ಆರೋಪದಡಿ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಗಂಗಾಧರ ಚನ್ನಬಸಪ್ಪ ಹಡಪದ್ ಅವರು ಅ.13ರಂದು ತೀರ್ಪು ಪ್ರಕಟಿಸಿದ್ದು, ಸಂತ್ರಸ್ತ ಬಾಲಕಿಗೆ ₹4 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಎಚ್.ಆರ್. ಜಗದೀಶ್ ವಾದ ಮಂಡಿಸಿದ್ದರು.

Share News

About BigTv News

Check Also

ಕುಂದಾಪುರ : ಪತಿಯ ಕಿರುಕುಳಕ್ಕೆ ಮನನೊಂದ ಗೃಹಿಣಿ ಫಿನಾಯಿಲ್‌ ಸೇವನೆ, ದೂರು ದಾಖಲು

ಉಡುಪಿ: ಪತಿಯ ಕಿರುಕುಳದಿಂದ ಮನನೊಂದ ಗೃಹಿಣಿಯೊಬ್ಬರು ಫಿನಾಯಿಲ್ ಸೇವಿಸಿ ಅಸ್ವಸ್ಥಗೊಂಡ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಲೂರಿನ …

Leave a Reply

Your email address will not be published. Required fields are marked *