Breaking News

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಆರೋಪ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಹಾಸನ: ಅಂತರ್ಜಾತಿ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಿಯಕರ ಸೂರ್ಯ (26) ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಿ ಕೇರಳ ಮೂಲದ ನಿಷ್ಮಾ (26) ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ. ಇಬ್ಬರೂ ಬೆಂಗಳೂರಿನ ವೈಟ್‌ಬರ್ಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಐದು ತಿಂಗಳಿಂದ ಲಿವ್‌-ಇನ್ ಸಂಬಂಧದಲ್ಲಿದ್ದರು ಎನ್ನಲಾಗಿದೆ. ಸೆಪ್ಟೆಂಬರ್ 24ರಂದು ಸೂರ್ಯ ಮೊಬೈಲ್ ಫೋನ್ ಬಿಟ್ಟು ನಾಪತ್ತೆಯಾಗಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ನಿಷ್ಮಾ ಆರೋಪಿಸಿದ್ದು, ಸೂರ್ಯನ ಪೋಷಕರು ಹಾಗೂ ಸ್ನೇಹಿತ ಪ್ರವೀಣ್ ವಿರುದ್ಧವೂ ದೂರಿದ್ದಾರೆ. ನಿಷ್ಮಾ ಆತ್ಮಹತ್ಯೆಗೆ ಯತ್ನಿಸಿದ್ದು, ಸೂರ್ಯ ಮರಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Share News

About BigTv News

Check Also

ಕುಂದಾಪುರ : ಪತಿಯ ಕಿರುಕುಳಕ್ಕೆ ಮನನೊಂದ ಗೃಹಿಣಿ ಫಿನಾಯಿಲ್‌ ಸೇವನೆ, ದೂರು ದಾಖಲು

ಉಡುಪಿ: ಪತಿಯ ಕಿರುಕುಳದಿಂದ ಮನನೊಂದ ಗೃಹಿಣಿಯೊಬ್ಬರು ಫಿನಾಯಿಲ್ ಸೇವಿಸಿ ಅಸ್ವಸ್ಥಗೊಂಡ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಲೂರಿನ …

Leave a Reply

Your email address will not be published. Required fields are marked *