ಕೋಲಾರ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮುಳಬಾಗಿಲು ತಾಲ್ಲೂಕಿನ ಪಿ. ಗಂಗಾಪುರ ಗ್ರಾಮದ ಶಿವಕುಮಾರ್‌ಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿದೆ. 2023ರ ಸೆಪ್ಟೆಂಬರ್ 30ರಂದು ದಾಖಲಾದ ದೂರಿನ ಮೇರೆಗೆ ನಂಗಲಿ ಪೊಲೀಸರು ಪೋಕ್ಸೋ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಪ್ರಸಾದ್ ಕೆ.ಬಿ. ಅವರು ಶಿಕ್ಷೆ ಪ್ರಕಟಿಸಿದ್ದು, ಸಂತ್ರಸ್ತ ಬಾಲಕಿಗೆ ಸರ್ಕಾರದಿಂದ ₹6 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕಿ ಡಿ. ಲಲಿತಕುಮಾರಿ ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news
