ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಅಂಜನಿ ಬಡಾವಣೆಯ ಫಿಲ್ಟರ್ ಬೀಟ್ ಸರ್ಕಲ್‌ನಲ್ಲಿ ಸುಮಿತ್ರಮ್ಮ (40) ಎಂಬ ಮಹಿಳೆಯನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೊದಲ ಪತಿ ವೆಂಕಟರೆಡ್ಡಿಯೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಆತ ಪರಾರಿಯಾಗಿದ್ದಾನೆ. ಕಾಪ್ಪಲ್ಲಿ ಗ್ರಾಮದ ಸುಮಿತ್ರಮ್ಮ ಒಂದು ವರ್ಷದ ಹಿಂದೆ ಪತಿಯಿಂದ ದೂರವಾಗಿ ರಮೇಶ್ ಎಂಬುವವರನ್ನು ಎರಡನೇ ಮದುವೆಯಾಗಿದ್ದರು ಎನ್ನಲಾಗಿದೆ. ವಿಚ್ಛೇದನ ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ಎರಡನೇ ಮದುವೆಯಾಗಿದ್ದ ವಿಚಾರವೇ ಗಲಾಟೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಗಳೊಂದಿಗೆ ದೇವಸ್ಥಾನಕ್ಕೆ ತೆರಳಿ ತರಕಾರಿ ಖರೀದಿಸಿ ಮನೆಗೆ ಮರಳುತ್ತಿದ್ದ ವೇಳೆ ಸುಮಿತ್ರಮ್ಮ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ಮೊಬೈಲ್ ಲೊಕೇಶನ್ ಆಧರಿಸಿ ಪರಾರಿಯಾಗಿರುವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
