ಮಂಡ್ಯ: ಮಳವಳ್ಳಿ ತಾಲ್ಲೂಕಿನ ಜವನಗಹಳ್ಳಿ ಗುಡ್ಡದಲ್ಲಿ ಪತ್ನಿ ಅರ್ಚನಾ (24) ಅವರನ್ನು ಕತ್ತು ಬಿಗಿದು ಕೊಲೆ ಮಾಡಿದ ಆರೋಪದ ಮೇಲೆ ಪತಿ ಚಂದ್ರಶೇಖರ್ ಅಲಿಯಾಸ್ ಚೇತನ್‌ನನ್ನು ಬೆಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಐದು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಡುವೆ ಅಕ್ರಮ ಸಂಬಂಧದ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಅಕ್ಟೋಬರ್ 10ರಂದು ನಡೆದ ಗಲಾಟೆ ವೇಳೆ ಚಂದ್ರಶೇಖರ್ ವೇಲ್‌ನಿಂದ ಪತ್ನಿಯ ಕತ್ತು ಬಿಗಿದು ಕೊಲೆ ಮಾಡಿ, ಮೃತದೇಹವನ್ನು ಗುಡ್ಡದಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
