ಕೋಲಾರ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಯುವತಿಯೊಬ್ಬಳು ಮಾಲೂರು ತಾಲೂಕಿನ ಹನುಮನಾಯಕನಹಳ್ಳಿ ಗ್ರಾಮದ ಪೃಥ್ವಿರಾಜ್ ಮನೆ ಎದುರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪೃಥ್ವಿರಾಜ್ ಹಾಗೂ ಯುವತಿ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಸುಮಾರು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಈ ಹಿಂದೆ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೃಥ್ವಿರಾಜ್ನನ್ನು ಬಂಧಿಸಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಮದುವೆಯಾಗುವುದಾಗಿ ಭರವಸೆ ನೀಡಿ ಮತ್ತೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣ ಮಾಲೂರು ಪೊಲೀಸ್ ಠಾಣೆ ಹಾಗೂ ಡಿಸಿಆರ್ಇ ಸೆಲ್ನಲ್ಲಿ ದಾಖಲಾಗಿದ್ದು, ನ್ಯಾಯ ಸಿಗುವವರೆಗೆ ಧರಣಿ ಮುಂದುವರಿಸುವುದಾಗಿ ಯುವತಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

