Breaking News

ಚೂರಿಯಿಂದ ಇರಿದು ಕೊಲ್ಲಲು ಯತ್ನ

ಮಂಗಳೂರು: ಲೇಡಿಗೋಷನ್ ಆಸ್ಪತ್ರೆ ಬಳಿಯ ಬಸ್ ತಂಗುದಾಣದಲ್ಲಿ ಕುಳಿತಿದ್ದ ವ್ಯಕ್ತಿಗೆ ಫೋನ್ ಕೇಳುವ ನೆಪದಲ್ಲಿ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ಅ.11ರಂದು ರಾತ್ರಿ ನಡೆದಿದೆ. ನೆಕ್ರಾಜೆಯ ಸಿರಾಜು ಬಿ.ಎನ್. (35) ಗಾಯಗೊಂಡಿದ್ದು, ಆರೋಪಿ ಇರ್ಷಾದ್‌ನನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 10 ಗಂಟೆ ಸುಮಾರಿಗೆ ಸಿರಾಜು ಫೋನ್ ನೋಡುತ್ತಿದ್ದಾಗ ಬಂದ ಆರೋಪಿ, ಫೋನ್ ನೀಡುವಂತೆ ಕೇಳಿದ್ದಾನೆ. ನಿರಾಕರಿಸಿದಾಗ ಜಗಳವಾಡಿ, ಜೀವ ಬೆದರಿಕೆ ಹಾಕಿ ಕುತ್ತಿಗೆಗೆ ಚೂರಿಯಿಂದ ಇರಿಯಲು ಯತ್ನಿಸಿದ್ದಾನೆ. ಸಿರಾಜು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಮೂಗು ಹಾಗೂ ಬಲಕೈಗೆ ಗಾಯಗಳಾಗಿವೆ. ಗಾಯಾಳುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Share News

About BigTv News

Check Also

ಹಗಲೆಲ್ಲಾ ಹಳೆ ಪಾತ್ರೆ ಮಾರಾಟ – ಕತ್ತಲಲ್ಲಿ ಮನೆಗಳಿಗೆ ಕನ್ನ ಹಾಕ್ತಿದ್ದ ಗ್ಯಾಂಗ್ ಅರೆಸ್ಟ್

ಕೋಲಾರ: ಮುಳಬಾಗಿಲು ಪೊಲೀಸರು ಕಾರ್ಯಾಚರಣೆ ನಡೆಸಿ ತಮಿಳುನಾಡಿನ ತಿರುಪತ್ತೂರು ಮೂಲದ ಮುನಿರಾಜು, ಸತೀಶ್ ಕುಮಾರ್ ಮತ್ತು ಪೆರುಮಾಳ್ ಎಂಬ ಮೂವರು …

Leave a Reply

Your email address will not be published. Required fields are marked *