Breaking News

ಅನೈತಿಕ ಸಂಬಂಧದ ಆರೋಪದ ಹಿನ್ನೆಲೆ ಯುವಕನ ಬರ್ಬರ ಹತ್ಯೆ – ಆರೋಪಿ ಪರಾರಿ!

ದಾವಣಗೆರೆ: ಅನೈತಿಕ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಪ್ರದೇಶದಲ್ಲಿ ಅಮಿತ್ (27) ಎಂಬ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪುರಸಭೆಯಲ್ಲಿ ಚಾಲಕನಾಗಿದ್ದ ಅಮಿತ್, ದೇವಸ್ಥಾನಕ್ಕೆ ಬಂದಿದ್ದಾಗ ಗಣೇಶ್ ಎಂಬಾತನೊಂದಿಗೆ ಜಗಳ ನಡೆದಿದೆ ಎನ್ನಲಾಗಿದೆ. ಈ ವೇಳೆ ಗಣೇಶ್, ಅಮಿತ್ ಕಣ್ಣಿಗೆ ಕಾರದಪುಡಿ ಎರಚಿ ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಅಮಿತ್, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಗಣೇಶ್ ಪತ್ನಿಯೊಂದಿಗೆ ಅಮಿತ್ ಅನೈತಿಕ ಸಂಬಂಧ ಹೊಂದಿದ್ದ ಎಂಬ ಆರೋಪ ಹಾಗೂ ಹಳೆಯ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಹೊನ್ನಾಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಹಗಲೆಲ್ಲಾ ಹಳೆ ಪಾತ್ರೆ ಮಾರಾಟ – ಕತ್ತಲಲ್ಲಿ ಮನೆಗಳಿಗೆ ಕನ್ನ ಹಾಕ್ತಿದ್ದ ಗ್ಯಾಂಗ್ ಅರೆಸ್ಟ್

ಕೋಲಾರ: ಮುಳಬಾಗಿಲು ಪೊಲೀಸರು ಕಾರ್ಯಾಚರಣೆ ನಡೆಸಿ ತಮಿಳುನಾಡಿನ ತಿರುಪತ್ತೂರು ಮೂಲದ ಮುನಿರಾಜು, ಸತೀಶ್ ಕುಮಾರ್ ಮತ್ತು ಪೆರುಮಾಳ್ ಎಂಬ ಮೂವರು …

Leave a Reply

Your email address will not be published. Required fields are marked *