ಕೋಲಾರ: ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ದ್ವಿತೀಯ ದರ್ಜೆ ಭೂಮಾಪಕ ಎಚ್.ಆರ್. ರಾಜೇಶ್ಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿದೆ. 2017ರ ಸೆಪ್ಟೆಂಬರ್ 15ರಂದು ಇ-ಸ್ವತ್ತು ಮಾಡಿಕೊಡಲು ₹3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ₹2,500 ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಪ್ರಕರಣದ ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ವಿಜಯಕುಮಾರ್ ಎಂ. ಆನಂದಶೆಟ್ಟಿ ಅಕ್ಟೋಬರ್ 12ರಂದು ಶಿಕ್ಷೆ ಪ್ರಕಟಿಸಿದ್ದಾರೆ. ಪ್ರಸ್ತುತ ರಾಜೇಶ್ ಆನೇಕಲ್ ತಾಲ್ಲೂಕಿನಲ್ಲಿ ಭೂಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
