ಕೋಲಾರ: ಮುಳಬಾಗಿಲು ಪೊಲೀಸರು ಕಾರ್ಯಾಚರಣೆ ನಡೆಸಿ ತಮಿಳುನಾಡಿನ ತಿರುಪತ್ತೂರು ಮೂಲದ ಮುನಿರಾಜು, ಸತೀಶ್ ಕುಮಾರ್ ಮತ್ತು ಪೆರುಮಾಳ್ ಎಂಬ ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಕೃಷ್ಣ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಹಗಲಿನಲ್ಲಿ ಹಳೆಯ ಪಾತ್ರೆ ಮಾರಾಟಗಾರರಂತೆ ಮನೆಗಳನ್ನು ಗುರುತಿಸಿ, ರಾತ್ರಿ ಬೀಗ ಹಾಕಿದ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದರು. ಮುಳಬಾಗಿಲಿನ ಟೀಚರ್ಸ್ ಕಾಲೋನಿ ಸೇರಿದಂತೆ ಜಿಲ್ಲೆಯ ಸುಮಾರು 10 ಕಡೆಗಳಲ್ಲಿ ಕಳ್ಳತನ ಎಸಗಿರುವ ಆರೋಪವಿದೆ. ಬಂಧಿತರಿಂದ 322 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ಸೇರಿದಂತೆ ₹52 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳತನದ ಹಣದಿಂದ ತಿರುಪತ್ತೂರಿನಲ್ಲಿ ₹20 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸುತ್ತಿದ್ದ ವಿಚಾರವೂ ಬೆಳಕಿಗೆ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
