ಹೊನ್ನಾಳಿ: ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಬನ್ನಿ ಮಹಾಂಕಾಳಿ ದೇವಸ್ಥಾನದ ಸಮೀಪ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಆರು ಮಂದಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹೊನ್ನಾಳಿ ನಿವಾಸಿ ಎಂ.ಕೆ. ಅಮಿತ್ (30) ಕೊಲೆಯಾದವರು. ಮಂಗಳವಾರ ರಾತ್ರಿ ದೇವಸ್ಥಾನದಲ್ಲಿ ಕಾರ್ಯಕ್ರಮ ಮುಗಿಸಿ ತಾಯಿಯೊಂದಿಗೆ ಮನೆಗೆ ಮರಳುತ್ತಿದ್ದ ಅಮಿತ್ ಮೇಲೆ ಸ್ಕೂಟರ್ ಮತ್ತು ಕಾರಿನಲ್ಲಿ ಬಂದ ಆರೋಪಿಗಳು ಖಾರದ ಪುಡಿ ಎರಚಿ ಮಚ್ಚು, ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಗಣೇಶ, ಚಂದ್ರು, ಸಚಿನ್, ಆಕಾಶ್, ಸಂದೀಪ್ ಹಾಗೂ ಸುಹಾಸ್ ವಿರುದ್ಧ ಅಮಿತ್ ತಾಯಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹೊನ್ನಾಳಿ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
