ಬೆಂಗಳೂರು, ಅ. 14: ಹಳೇ ದ್ವೇಷದ ಹಿನ್ನೆಲೆಯಲ್ಲಿ ಬೆಂಗಳೂರಿನ ಪಿಳ್ಳಗಾನಹಳ್ಳಿ ನೈಸ್ ರಸ್ತೆ ಸೇತುವೆ ಬಳಿ ರಿಯಲ್ ಎಸ್ಟೇಟ್ ಉದ್ಯಮಿ ಸಂಪಂಗಿ, ಶ್ರೀನಿವಾಸ್ ಅಲಿಯಾಸ್ ಮೆಂಟಲ್ ಸೀನನ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಶ್ರೀನಿವಾಸ್ ಕಾಲಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರೀನಿವಾಸ್ ಹಿಂದೆ ಸಂಪಂಗಿ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ವೈಯಕ್ತಿಕ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದರಿಂದ ಸುಮಾರು ಒಂದು ವರ್ಷದ ಹಿಂದೆ ಶ್ರೀನಿವಾಸ್ನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಇತ್ತೀಚೆಗೆ ಶ್ರೀನಿವಾಸ್ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಸಂಪಂಗಿ ದೂರು ನೀಡಿದ್ದ. ಇಂದು ಸಂಜೆ ಕಾರಿನಲ್ಲಿ ಬಂದ ಸಂಪಂಗಿ ಹಾಗೂ ಆತನ ಸಹಚರರು ಬೈಕ್ನಲ್ಲಿ ಬರುತ್ತಿದ್ದ ಶ್ರೀನಿವಾಸ್ನನ್ನು ಅಡ್ಡಗಟ್ಟಿ, ಪರವಾನಗಿ ಹೊಂದಿದ್ದ ಬಂದೂಕಿನಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
