ಚಿತ್ರದುರ್ಗ: ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮದ ಆಶಾ (24), ಇಮ್ರಾನ್ (40) ಎಂಬ ವಾಹನ ಚಾಲಕನನ್ನು ಪ್ರೀತಿಸಿ 2023ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಎರಡೂವರೆ ವರ್ಷದ ಮಗುವಿದೆ. ಆಶಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದರೂ, ಪತ್ನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆಶಾ ಪೋಷಕರು ಆರೋಪಿಸಿ ದೂರು ದಾಖಲಿಸಿದ್ದಾರೆ. ಇದು ಲವ್ ಜಿಹಾದ್ ಪ್ರಕರಣ ಎಂದು ಆರೋಪಿಸಿರುವ ಹಿಂದೂಪರ ಸಂಘಟನೆಗಳು, ಘಟನೆ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
