ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಗೃಹಲಕ್ಷ್ಮಿ ಲೇಔಟ್ನಲ್ಲಿ ಆರೋಪಿ ಲಾಂಗ್ ಹಿಡಿದು ವಿಡಿಯೋ ಮಾಡಿದ್ದ ಎನ್ನಲಾಗಿದೆ. ಈ ವಿಡಿಯೋ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಎರಡು ಲಾಂಗ್ಗಳನ್ನು ವಶಪಡಿಸಿಕೊಂಡು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
