ಮೈಸೂರು: ಕಳೆದ ವರ್ಷ ದಸರಾ ವೇಳೆ ಬಲೂನ್ ಮಾರಲು ಬಂದಿದ್ದ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಕಾರ್ತಿಕ್ (32) ಅಪರಾಧಿ ಎಂದು ಮೈಸೂರಿನ ತ್ವರಿತ ನ್ಯಾಯಾಲಯ ತೀರ್ಪು ನೀಡಿದೆ. ನಾಳೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಮೈಸೂರಿನ ದೊಡ್ಡಕೆರೆ ಮೈದಾನದಲ್ಲಿ ಪೋಷಕರೊಂದಿಗೆ ತಂಗಿದ್ದ ಬಾಲಕಿಯನ್ನು ಅಕ್ಟೋಬರ್ 9ರಂದು ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಪೊಲೀಸರು 24 ಗಂಟೆಯೊಳಗೆ ಆರೋಪಿ ಕಾರ್ತಿಕ್ನನ್ನು ಬಂಧಿಸಿದ್ದರು. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ಜಯಂತಿ ವಾದ ಮಂಡಿಸಿದ್ದರು. ಇದೀಗ ಆರೋಪ ಸಾಬೀತಾಗಿದ್ದು, ದಸರಾ ಸಮಯದಲ್ಲೇ ಅಪರಾಧಿಗೆ ಶಿಕ್ಷೆ ಪ್ರಕಟವಾಗಲಿರುವುದು ಗಮನ ಸೆಳೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
