ಮುಳಬಾಗಿಲು: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿಯ ಲಾಡ್ಜ್ನಲ್ಲಿ ಪತಿಯೇ ಪತ್ನಿಯನ್ನು ಬಿಯರ್ ಬಾಟಲಿಯಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಗುರುವಾರ ನಡೆದಿದೆ. ಮುಳಬಾಗಿಲಿನ ಆಸಿಯಾ (28) ಕೊಲೆಯಾದ ಮಹಿಳೆ. ಆಸಿಯಾ ಮತ್ತು ಪತಿ ನವೀದ್ ಬಾಷಾ ಬೆಂಗಳೂರಿನಿಂದ ಮದನಪಲ್ಲಿಗೆ ತೆರಳಿ ಲಾಡ್ಜ್ನಲ್ಲಿ ತಂಗಿದ್ದರು. ಈ ವೇಳೆ ಪತಿ ಬಿಯರ್ ಬಾಟಲಿಯಿಂದ ಚುಚ್ಚಿ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೃತ್ಯದ ಬಳಿಕ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
