ಹುಬ್ಬಳ್ಳಿ: ಗಿರಣಿಚಾಳ ಸಮೀಪ ಕಸಕಂಟಿಗಳಲ್ಲಿ ಅಪರಿಚಿತ ಶವ ಪತ್ತೆ..!
ಹುಬ್ಬಳ್ಳಿ: ನಗರದ ಗಿರಣಿಚಾಳ ಸಮೀಪದ ರಸ್ತೆಯ ಪಕ್ಕದಲ್ಲಿರುವ ಕಸಕಂಟಿಗಳಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ….
ಕಸಕಂಟಿಗಳ ನಡುವೆ ಶವ ಬಿದ್ದಿರುವುದನ್ನು ಗಮನಿಸಿದ ಹಿನ್ನೆಲೆಯಲ್ಲಿ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕಸಕಂಟಿಗಳಲ್ಲಿದ್ದ ಶವವನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ…
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ವ್ಯಕ್ತಿ ಯಾರು, ಸಾವಿಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಮೃತ ವ್ಯಕ್ತಿಯ ಗುರುತು ಹಾಗೂ ಸಾವಿನ ಹಿಂದಿನ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ….
bigtvnews | Hubli Dharwad News | Kannada News | Karnataka News Hubli News | News In Hubli | Local news
