ತುಮಕೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ತುಮಕೂರಿನ ಎಸ್.ಎಸ್.ಪುರಂನಲ್ಲಿ ನಡೆದಿದೆ. ಪವಿತ್ರ (33) ಗಂಭೀರವಾಗಿ ಗಾಯಗೊಂಡಿದ್ದು, ಪತಿ ನಾಗರಾಜು (35) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಗರಾಜು ಕುಡಿದ ಮತ್ತಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಪವಿತ್ರ ಅವರನ್ನು ಸ್ಥಳೀಯರು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

