ಮಂಗಳೂರು: ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಗರದ ಚರ್ಚ್ನ ಧರ್ಮಗುರುವಿನ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಎಫ್ಐಆರ್ ಪ್ರಕಾರ, ಚಾಕ್ಲೆಟ್ ನೀಡಿ ಹಾಗೂ ಪ್ರೀತಿಯ ಮಾತುಗಳಿಂದ ಪುಸಲಾಯಿಸಿ ಬಾಲಕರನ್ನು ಚರ್ಚ್ನ ಕೊಠಡಿಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಆಗಸ್ಟ್ 14ರಂದು ಕೂಡ ಬಾಲಕನ ಮೇಲೆ ದೌರ್ಜನ್ಯ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಾಲಕರು ಈ ವಿಚಾರವನ್ನು ಸ್ನೇಹಿತರ ಬಳಿ ತಿಳಿಸಿದ ಬಳಿಕ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಪೋಷಕರು ಬಿಷಪ್ ಗಮನಕ್ಕೆ ತಂದಿದ್ದು, ಅವರ ಸೂಚನೆಯಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

