Breaking News

ದಶಕದ ಬಳಿಕ ನಕಲಿ ಅಂಕಪಟ್ಟಿ ಹಗರಣ ಬಯಲು: ಆರೋಗ್ಯ ಇಲಾಖೆಯ 52 ಸಿಬ್ಬಂದಿ ಅಮಾನತು

ಬೆಂಗಳೂರು:ಕಲ್ಯಾಣ ಕರ್ನಾಟಕ ಭಾಗದಲ್ಲಿ ನಕಲಿ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆದ ಆರೋಪದ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 52 ಗ್ರೂಪ್‌-ಡಿ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಆರೋಪಿತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಇಲಾಖೆ ಸೂಚಿಸಿದೆ. 2015ರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದು 2023ರಲ್ಲಿ ಬಂದ ದೂರಿನ ತನಿಖೆಯಿಂದ ಬೆಳಕಿಗೆ ಬಂದಿದೆ. ಕೆಲವರು ಮೂಲತಃ 230 ಅಂಕ ಪಡೆದಿದ್ದರೂ, ನಕಲಿ ಅಂಕಪಟ್ಟಿಗಳ ಮೂಲಕ 625ಕ್ಕೆ 560ರಿಂದ 586 ಅಂಕ ಪಡೆದಿರುವಂತೆ ತೋರಿಸಿಕೊಂಡಿದ್ದಾರೆ ಎನ್ನಲಾಗಿದೆ. ಅಂಕಪಟ್ಟಿಗಳ ದೃಢೀಕರಣ ಪತ್ರಗಳೂ ನಕಲಿ ಎಂಬ ಆರೋಪ ಕೇಳಿಬಂದಿದೆ. ಸರ್ಕಾರದ ಸೆ. 22ರ ಆದೇಶದಂತೆ ನೋಟಿಸ್ ನೀಡಿದರೂ ಆರೋಪಿತರು ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಅಮಾನತು ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ, ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುವಂತೆ ಆರೋಗ್ಯ ಇಲಾಖೆ ಆಯುಕ್ತರು ನಿರ್ದೇಶನ ನೀಡಿದ್ದಾರೆ.

Share News

About BigTv News

Check Also

ಸತ್ತ ಜಾನುವಾರುಗಳ ಪರಿಹಾರದ ಹಣ ನುಂಗಿದ ಪಾಪಿಗಳು : ರಾಬಕೋವಿ ಹಾಲು ಒಕ್ಕೂಟದ ಮತ್ತಷ್ಟು ಅಕ್ರಮ ಬಯಲು!

ಬಳ್ಳಾರಿ: ರಾಬಕೋವಿ ಹಾಲು ಒಕ್ಕೂಟದಲ್ಲಿ ಮೃತಪಟ್ಟ ಜಾನುವಾರುಗಳ ವಿಮಾ ಪರಿಹಾರದ ಹಣ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿರುವ ಗಂಭೀರ …

Leave a Reply

Your email address will not be published. Required fields are marked *