ಕುಂದಾಪುರ, ಅ.16: ವಾಲ್ತೂರು ಕೊಕ್ಕೋಡಿಗೆ ಹೋಗುವ ದಾರಿಯ ಗೇರು ಹಾಡಿಯಲ್ಲಿ ಮೇಯುತ್ತಿದ್ದ ದನವನ್ನು ಕಳವು ಮಾಡಲು ಯತ್ನಿಸಿದ ಆರೋಪಿಗಳು, ವ್ಯಕ್ತಿಯೊಬ್ಬರನ್ನು ಕಂಡು ಕಾರು ಬಿಟ್ಟು ಪರಾರಿಯಾದ ಘಟನೆ ಅ.15ರಂದು ನಡೆದಿದೆ. ಕಾವ್ರಾಡಿ ಗ್ರಾಮದ ಪ್ರಕಾಶ್ ಎಂಬವರಿಗೆ ಸೇರಿದ ದನವನ್ನು ಇಮ್ತಿಯಾಝ್, ರಿಜ್ವಾನ್ ದಸ್ತಗೀರ್ ಮತ್ತು ಜಿಮಾಮ್ ಎಂಬವರು ಕಾರಿಗೆ ತುಂಬಿಸಲು ಎಳೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಯೊಬ್ಬರನ್ನು ಕಂಡು ದನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಸುಮಾರು 2 ಕಿ.ಮೀ. ದೂರದ ಕಾವ್ರಾಡಿ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ಕಾರನ್ನು ರಸ್ತೆಯ ಬದಿಯಲ್ಲಿ ಬಿಟ್ಟು ಸ್ಕೂಟರ್ನಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

