ಯಾದಗಿರಿ:ವೈದ್ಯಕೀಯ ಪದವಿ ಮತ್ತು ಅಗತ್ಯ ನೋಂದಣಿ ಇಲ್ಲದೆ ಅನಧಿಕೃತವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಎಂಟು ನಕಲಿ ವೈದ್ಯರ ಕ್ಲಿನಿಕ್ಗಳನ್ನು ಬಂದ್ ಮಾಡಿ, ಸಂಬಂಧಪಟ್ಟವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ತಿಳಿಸಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಕಳೆದ ಒಂದು ವಾರದಿಂದ ಕಾರ್ಯಾಚರಣೆ ನಡೆಸಿ ಎಂಟು ಅನಧಿಕೃತ ಕ್ಲಿನಿಕ್ಗಳನ್ನು ಮುಚ್ಚಿಸಿದೆ. ಶೇಕ್ ಮಸ್ತಾನ್ ವಾರಿ, ಸತೀಶ್, ಕೃಷ್ಣ, ಸಂಜೀವ ಬೋಸೆ, ಶರಣಬಸವ ಜಾಂಬವ, ಮಹಾದೇವಪ್ಪ, ಭೀಮಣ್ಣ ಬಳಚಟ್ಟಿ ಹಾಗೂ ಮಶಾಕ್ ನೂರಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವೈದ್ಯಕೀಯ ಪದವಿ ಮತ್ತು ಅಗತ್ಯ ನೋಂದಣಿ ಇಲ್ಲದೆ ಚಿಕಿತ್ಸೆ ನೀಡುವವರ ವಿರುದ್ಧ ಕೆಪಿಎಂಇ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಇಂತಹ ಅನಧಿಕೃತ ವೈದ್ಯರ ಬಳಿ ಚಿಕಿತ್ಸೆ ಪಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

