Breaking News

ಬೆಂಗಳೂರಿನಲ್ಲಿ ರೋಡ್ ರೇಜ್ ಅಟ್ಟಹಾಸ – ಹಾರ್ನ್ ಮಾಡಿದ್ದಕ್ಕೆ ಕಾರು ಚೇಸ್ ಮಾಡಿ ಆಟೋ ಚಾಲಕನ ಭೀಕರ ದರ್ಪ!

ಬೆಂಗಳೂರು: ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಹಾರ್ನ್ ಮಾಡಿದ ಕಾರಣಕ್ಕೆ ಕೋಪಗೊಂಡ ಆಟೋ ಚಾಲಕನೊಬ್ಬ ಕಾರನ್ನು ಬೆನ್ನಟ್ಟಿ ಅಡ್ಡಗಟ್ಟಿದ ಘಟನೆ ನಡೆದಿದೆ. ಆಟೋ ಚಾಲಕನ ಪುಂಡಾಟಿಕೆ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದೆ. ರಾಂಗ್ ಟರ್ನ್ ತೆಗೆದುಕೊಂಡ ಆಟೋಗೆ ಅಪಘಾತ ತಪ್ಪಿಸಲು ಕಾರು ಚಾಲಕ ಹಾರ್ನ್ ಮಾಡಿದ್ದಾರೆ. ಇದರಿಂದ ಕೋಪಗೊಂಡ ಆಟೋ ಚಾಲಕ ಕಾರನ್ನು ಬೆನ್ನಟ್ಟಿ ತಡೆದು, ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಟೋ ಚಾಲಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಸಂಚಾರ ಪೊಲೀಸರನ್ನು ಒತ್ತಾಯಿಸಿದ್ದಾರೆ.

Share News

About BigTv News

Check Also

ಸತ್ತ ಜಾನುವಾರುಗಳ ಪರಿಹಾರದ ಹಣ ನುಂಗಿದ ಪಾಪಿಗಳು : ರಾಬಕೋವಿ ಹಾಲು ಒಕ್ಕೂಟದ ಮತ್ತಷ್ಟು ಅಕ್ರಮ ಬಯಲು!

ಬಳ್ಳಾರಿ: ರಾಬಕೋವಿ ಹಾಲು ಒಕ್ಕೂಟದಲ್ಲಿ ಮೃತಪಟ್ಟ ಜಾನುವಾರುಗಳ ವಿಮಾ ಪರಿಹಾರದ ಹಣ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿರುವ ಗಂಭೀರ …

Leave a Reply

Your email address will not be published. Required fields are marked *