Breaking News

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ಶೇಖರ್ ಅಲಿಯಾಸ್ ಸೇಸಪ್ಪ (30) ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ತನಿಖೆ ನಡೆಸಿದ್ದ ಅಂದಿನ ವೃತ್ತ ನಿರೀಕ್ಷಕ ಉಮೇಶ್ ಯು. ಅವರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು ₹50 ಸಾವಿರ ದಂಡ ವಿಧಿಸಿ ಆದೇಶಿಸಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ರೋಡ್ ರೇಜ್ ಅಟ್ಟಹಾಸ – ಹಾರ್ನ್ ಮಾಡಿದ್ದಕ್ಕೆ ಕಾರು ಚೇಸ್ ಮಾಡಿ ಆಟೋ ಚಾಲಕನ ಭೀಕರ ದರ್ಪ!

ಬೆಂಗಳೂರು: ಸರ್ಜಾಪುರ ಮುಖ್ಯ ರಸ್ತೆಯಲ್ಲಿ ಹಾರ್ನ್ ಮಾಡಿದ ಕಾರಣಕ್ಕೆ ಕೋಪಗೊಂಡ ಆಟೋ ಚಾಲಕನೊಬ್ಬ ಕಾರನ್ನು ಬೆನ್ನಟ್ಟಿ ಅಡ್ಡಗಟ್ಟಿದ ಘಟನೆ ನಡೆದಿದೆ. …

Leave a Reply

Your email address will not be published. Required fields are marked *