Breaking News

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭಿಕ್ಷೆ ಬೇಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಮೀಜಿ ಹಾಗೂ ವಿದ್ಯಾರ್ಥಿಗಳ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಭಾಟಿಯಾ (28) ಮತ್ತು ವೆಂಕಟ ದಿನೇಶ್ (27) ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ವಿಮಾನ ಟಿಕೆಟ್‌ಗೆ ಹಣವಿಲ್ಲ, ಪರ್ಸ್ ಕಳೆದುಹೋಗಿದೆ ಎಂದು ಸುಳ್ಳು ಹೇಳಿ ಪ್ರಯಾಣಿಕರಿಂದ ಹಣ ಪಡೆಯುತ್ತಿದ್ದರು. ಇವರ ಮಾತು ನಂಬಿದ ಟೆಕ್ಕಿಯೊಬ್ಬರು 37,300 ರೂ. ಫೋನ್‌ಪೇ ಮಾಡಿದ್ದರು. ಮತ್ತೊಂದೆಡೆ ಕಾವಿ ಧರಿಸಿ ಸಾಧುಗಳಂತೆ ನಟಿಸಿ ಹಣ ಸಂಗ್ರಹಿಸುತ್ತಿದ್ದರು. ವಿಚಾರಣೆ ವೇಳೆ ಇಬ್ಬರೂ ಸೇರಿ 1 ಲಕ್ಷ ರೂ.ಗೂ ಅಧಿಕ ಹಣ ಪಡೆದಿರುವುದು ಬೆಳಕಿಗೆ ಬಂದಿದ್ದು, ಏರ್‌ಪೋರ್ಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬಾಲಕನ ಹತ್ಯೆ ಪ್ರಕರಣ: ಅಪ್ರಾಪ್ತರಿಬ್ಬರ ಬಂಧನ

ಬೆಂಗಳೂರು: ವಿಭೂತಿಪುರ ಕೆರೆಯ ಬಳಿ 13 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಎಚ್‌ಎಎಲ್ ಠಾಣೆ …

Leave a Reply

Your email address will not be published. Required fields are marked *