ಮಂಗಳೂರು ನಗರದ ವೆಲೆನ್ಸಿಯಾದ ಚರ್ಚ್ವೊಂದರ ಧರ್ಮಗುರು ಸಿಪ್ರಿಯನ್ ಪಿಂಟೋ ಅವರನ್ನು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಧರ್ಮಗುರು ವಿರುದ್ಧ ಸಂತ್ರಸ್ತರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಪ್ರಿಯನ್ ಪಿಂಟೋ ಅವರನ್ನು ಸಂಬಂಧಿಕರೊಬ್ಬರ ಮನೆಯಿಂದ ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

