ವಿಜಯಪುರದಲ್ಲಿ ಸೊಸೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಗಣೇಶ ನಗರದ ನಿವಾಸಿ ರಮೇಶ ಮೂರಮಟ್ಟಿಗೆ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದೆ. 2020ರ ಏಪ್ರಿಲ್‌ನಲ್ಲಿ ಆರೋಪಿ ಸೊಸೆ ಮೇಲೆ ಲೈಂಗಿಕ ಹಲ್ಲೆ ನಡೆಸಿ, ವಿಷಯವನ್ನು ಯಾರಿಗೂ ತಿಳಿಸದಂತೆ ಜೀವ ಬೆದರಿಕೆ ಹಾಕಿದ್ದನು. ಈ ಸಂಬಂಧ ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ವೇಳೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಹಾಗೂ 3.30 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

