ಬೆಂಗಳೂರು: ವಿಭೂತಿಪುರ ಕೆರೆಯ ಬಳಿ 13 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಂಗಳ ಹಿಂದೆ ದ್ವಿಚಕ್ರ ವಾಹನ ಅಡ್ಡಗಟ್ಟಿದ ವಿಚಾರಕ್ಕೆ ನಡೆದ ಜಗಳದ ವೈಷಮ್ಯದಿಂದ ಅಕ್ಟೋಬರ್ 4ರಂದು ಬಾಲಕನ ಮೇಲೆ ಇಬ್ಬರು ದಾಳಿ ನಡೆಸಿದ್ದಾರೆ. ಬಳಿಕ ಮುಖದ ಮೇಲೆ ದೊಡ್ಡ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮರುದಿನ ಬೆಳಗ್ಗೆ ಬಾಲಕನ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
